ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಠಿಸಿದ್ದು ಈವರೆಗೆ 10 ಮಂದಿ ಬಲಿಯಾಗಿದ್ದಾರೆ.
ನಿನ್ನೆ ಬಿರುಗಾಳಿ ಸಹಿತ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಈ ಮಧ್ಯೆ ನಗರದ ಚಾಮರಾಜಪೇಟೆಯಲ್ಲಿ ಮಳೆಯಿಂದ ಮನೆ ಮೇಲ್ಚಾವಣಿ, ಸಿಮೆಂಟ್ ಇಟ್ಟಿಗೆ ಬಿದ್ದು ಓರ್ವ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಜುನಾಥ್ ಎಂಬುವವರು ಸಿಮೆಂಟ್ ಇಟ್ಟಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುನಾಥ್ ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಮೂಲಕ ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ 10 ಮಂದಿ ಬಲಿಯಾಗಿದ್ದಾರೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ, ಜೆಪಿನಗರಲ್ಲಿ ಓರ್ವ, ಯಾರಬ್ ನಗರದಲ್ಲಿ ಓರ್ವ ಚಾಮರಾಜಪೇಟೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
Key words: Another, death, heavy rain, Bengaluru







