Monday, November 2, 2026

Dasara Wishes

ಗ್ಯಾರಂಟಿ ಯೋಜನೆ ಬಗ್ಗೆ ನಾಲ್ಕು ಇಲಾಖೆಗಳ ಜೊತೆ ಸಿಎಂ ಸಿದ್ಧರಾಮಯ್ಯ ಪ್ರಗತಿ ...
Happy Dasara
Home Front Page ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನ

ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನ

ಬೆಂಗಳೂರು, ಏಪ್ರಿಲ್ 25, 2021 (www.justkannada.in): ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಕರ್ನಾಟಕ ಮೂಲದ ಸುಪ್ರೀಂಕೋರ್ಟ್‌ ನ್ಯಾಯಾಧೀಶ ನ್ಯಾ.ಮೋಹನಗೌಡರ ಕೊನೆಯುಸಿರೆಳೆದಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರ ತಾಲೂಕು ಚಿಕ್ಕೇರೂರಿನವರಾದ ಅವರು 3 ದಿನ ಹಿಂದೆ ಅನಾರೋಗ್ಯದಿಂದ ಹರ್ಯಾಣದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಕ್ಯಾನ್ಸರ್‌ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು ಎಂದು ಸುಪ್ರೀಂಕೋರ್ಟ್‌ನ ಸಹಾಯಕ ರಿಜಿಸ್ಟ್ರಾರ್‌ ಗಗನ್‌ ಸೋನಿ ತಿಳಿಸಿದ್ದಾರೆ.