ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವಿಗೆ ಐಟಿ ಕಾರಣ- ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪ…

ಬೆಂಗಳೂರು, ಅ,12,2019(www.justkannada.in) ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವಿಗೆ ಐಟಿ ಅಧಿಕಾರಿಗಳೇ ಕಾರಣ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ರಮೇಶ್ ಆತ್ಮಹತ್ಯೆ ವಿಚಾರ ಕುರಿತು ವಿಧಾನಸೌಧದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಐಟಿಯವರು ಕಿರುಕುಳ ಕೊಡುತ್ತಿದ್ದಾರೆ ಎಂದು ತನ್ನ ಆಪ್ತರ ಬಳಿ ಹೇಳಿಕೊಂಡಿದ್ದರಂತೆ. ಹೀಗಾಗಿ  ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅವರ ಆತ್ಮಹತ್ಯೆಗೆ  ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ  ಕಿಡಿಕಾರಿದರು.

ಐಟಿ ಅಧಿಕಾರಿಗಳು ದಾಳಿಗಳನ್ನು ನಡೆಸುವುದು ತಪ್ಪಲ್ಲ. ಆದರೆ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡುತ್ತಿರುವುದು ಏಕೆ..? ಬಿಜೆಪಿಯಲ್ಲಿ ದುಡ್ಡು ಇರುವವರು ಇಲ್ಲವಾ? ಅವರು ವೈದ್ಯಕೀಯ ಕಾಲೇಜುಗಳನ್ನು, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿಲ್ಲವಾ? ಅವರ ಮೇಲೆಯೂ ಐಟಿ ದಾಳಿ ನಡೆಸಲಿ. ರಾಜಕೀಯ ದ್ವೇಷದಲ್ಲಿ ಐಟಿ ದಾಳಿ ಸರಿಯಲ್ಲ ಎಂದು ಸಿದ್ಧರಾಮಯ್ಯ ಐಟಿ ವಿರುದ್ದ ಗುಡುಗಿದರು.

Key words: death –Ramesh- IT – Former CM Siddaramaiah