Thursday, September 17, 2026

BDA Apartments

ಮೈಸೂರಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ BDA JK_Adv BDA Adv
Home Crime ಮೈಸೂರಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ.

ಮೈಸೂರಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ.

ಮೈಸೂರು,ಮೇ,29,2023(www.justkanna.in): ಮೈಸೂರು ಜಿಲ್ಲೆಯ ಟಿ.ನರಸೀಪುರ-ಕೊಳ್ಳೆಗಾಲ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ  ಸಂಭವಿಸಿದ್ದ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ.

ಖಾಸಗಿ ಬಸ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿ ರಭಸಕ್ಕೆ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತಪಟ್ಟವರು ಬಳ್ಳಾರಿ ಮೂಲದವರು. ಪ್ರವಾಸಕ್ಕೆಂದು ಮೈಸೂರಿಗೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.ಮೈಸೂರಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ car-bus car bus

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ.

Key words: Death -rises – 10  People- Mysore -accident