Saturday, September 26, 2026

BDA Apartments

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ವೇಳೆ ಹಿನ್ನೀರಿನಲ್ಲಿ ಮುಳುಗಿ ಸಾಫ್ಟ್ ವೇರ್ ...
Home Crime ಬರ್ತ್ ಡೇ ಪಾರ್ಟಿಗೆ ತೆರಳಿದ್ದ ವೇಳೆ ಹಿನ್ನೀರಿನಲ್ಲಿ ಮುಳುಗಿ ಸಾಫ್ಟ್ ವೇರ್ ಇಂಜಿನಿಯರ್ ಸಾವು.

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ವೇಳೆ ಹಿನ್ನೀರಿನಲ್ಲಿ ಮುಳುಗಿ ಸಾಫ್ಟ್ ವೇರ್ ಇಂಜಿನಿಯರ್ ಸಾವು.

ಚಿಕ್ಕಬಳ್ಳಾಪುರ,ಸೆಪ್ಟಂಬರ್,25,2021(www.justkannada.in): ಬರ್ತ್ ಡೇ ಪಾರ್ಟಿಗೆ ತೆರಳಿದ್ದ ವೇಳೆ ಹಿನ್ನೀರಿನಲ್ಲಿ ಮುಳುಗಿ ಸಾಫ್ಟ್ ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ನಗರದ ಸುಂಕದಕಟ್ಟೆಯ ನಿವಾಸಿ ​ ರೋಹಿತ್  ಮೃತಪಟ್ಟ ಸಾಫ್ಟ್​​ವೇರ್ ಎಂಜಿನಿಯರ್.

ಅಕ್ಸೆಂಚರ್ ಸಾಫ್ಟ್​​ವೇರ್​ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್​​ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ ಮರವನ್ನು ಹತ್ತಿ ಸೆಲ್ಫಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಈಜು ಬಾರದಿದ್ದರೂ ರೋಹಿತ್ ನೀರಿಗಿಳಿದಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಕುರಿತು ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: death – software engineer- drowned – backwaters – birthday party.