ರೈತರ ಪಾಲಿಗೆ ಮರಣ ಶಾಸನವಾದ ಕಾನೂನುಗಳು ಜಾರಿ ತಡೆಯಲು ಪ್ರಯತ್ನ : ಸಿದ್ದರಾಮಯ್ಯ

ಬೆಂಗಳೂರು,ಡಿಸೆಂಬರ್,08,2020(www.justkannada.in) :  ಕೃಷಿಗೆ ಮಾರಕವಾದ ಮಸೂದೆಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನಿರಂತವಾಗಿ ಇರಲಿದೆ. ರೈತರ ಪಾಲಿಗೆ ಮರಣ ಶಾಸನವಾದ ಕಾನೂನುಗಳು ಜಾರಿಯಾಗದಂತೆ ತಡೆಯಲು ಸದನದ ಒಳಗೆ ಮತ್ತು ಹೊರಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.  logo-justkannada-mysore

ಮಸೂದೆ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೊರಟಿರಲು ಕಾರಣವೇನು?  

ಸರ್ಕಾರ ಜಾರಿಗೊಳಿಸುವ ಕಾನೂನುಗಳು, ನೀತಿ ನಿಯಮಗಳು ಸಕಾರಾತ್ಮಕ ಬದಲಾವಣೆ ತರುವಂತಿರಬೇಕೇ ಹೊರತು ಸರ್ವನಾಶಕ್ಕೆ ದಾರಿಮಾಡಿಕೊಂಡುವಂತೆ ಇರಬಾರದು. ರೈತರೇ ತಮಗೆ ಈ ಮಸೂದೆ ಬೇಡವೆಂದರೂ, ಏನಾದರೂ ಆಗಲಿ ಮಸೂದೆ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೊರಟಿರಲು ಕಾರಣವೇನು?  ರೈತರ ಬಗ್ಗೆ ನೈಜ ಕಾಳಜಿಯಿದೆಯೇ?  ಎಂದು ಪ್ರಶ್ನಿಸಿದ್ದಾರೆ.

ಇವರಿಬ್ಬರಲ್ಲಿ ಯಾರು ಸತ್ಯ ಹೇಳ್ತಿದ್ದಾರೆ? ಯಾರು ಸುಳ್ಳು ಹೇಳ್ತಿದ್ದಾರೆ?

ಒಂದೆಡೆ ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದು ಎಪಿಎಂಸಿ ಗಳನ್ನು ಮುಚ್ಚಲು ಸಕಾಲ ಎನ್ನುತ್ತಾರೆ. ಇನ್ನೊಂದೆಡೆ ಪ್ರಧಾನಿಯವರು ಎಪಿಎಂಸಿ ಗಳನ್ನು ಮುಚ್ಚಲ್ಲ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಸಿಗುತ್ತೆ ಅಂತಾರೆ. ಇವರಿಬ್ಬರಲ್ಲಿ ಯಾರು ಸತ್ಯ ಹೇಳ್ತಿದ್ದಾರೆ? ಯಾರು ಸುಳ್ಳು ಹೇಳ್ತಿದ್ದಾರೆ? ಎಂದು ಕಿಡಿಕಾರಿದ್ದಾರೆ.

 Death,statute,peasantry,Laws,prevent,logistics,Attempt,Siddaramaiah

key words : Death-statute-peasantry-Laws-prevent-logistics- Attempt-Siddaramaiah