ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.

ತುಮಕೂರು,ಡಿಸೆಂಬರ್,30,2022(www.justkannada.in):  ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ದೇವರಾಯನದುರ್ಗದಲ್ಲಿ  ಈ ಘಟನೆ ನಡೆದಿದೆ. ಗುತ್ತಿಗೆದಾರ ಟಿ.ಎನ್ ಪ್ರಸಾದ್(50) ಆತ್ಮಹತ್ಯೆಗೆ ಶರಣಾದವರು. ಸಾಲ ಬಾಧೆ ತಾಳಲಾರದೇ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರವಾಸಿ ಮಂದಿರದಲ್ಲಿ ಫ್ಯಾನ್ ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಕ್ಯಾತಸಂದ್ರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆ ವರದಿಯ ಬಳಿಕ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬರಲಿದೆ.

Key words: debt-contractor –committed- suicide-tumkur