ಸಾಲಮನ್ನಾ ವಿಚಾರ: ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್ ಯಡಿಯೂರಪ್ಪ…

ಚಿತ್ರದುರ್ಗ,ಸೆ,24,2019(www.justkannada.in):  ಸಾಲಮನ್ನಾ ವಿಚಾರದಲ್ಲಿ ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದಾರೆ. ಹೌದು,  ರೈತರ ಸಾಲಮನ್ನಾ ವಿಚಾರದಲ್ಲಿ ಹಿಂದಿನ ಸರ್ಕಾರದ ಕ್ರಮವನ್ನು ಮುಂದುವರೆಸಲಾಗುವುದು ಎಂದು  ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಆದಾಗಿಂದಲೂ ನಾನು ಅಗ್ನಿ ಪರೀಕ್ಷೆ ಎದುರಿಸುತ್ತಿದ್ದೇನೆ. ಮಳೆಯಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಕೆಲವು ಜಿಲ್ಲೆಗಳಲ್ಲಿ ಬರ ಇದೆ.  ನೆರೆ ಹಾವಳಿಯಿಂದ ತತ್ತರಿಸಿರುವ ಸಂತ್ರಸ್ತರಿಗೆ ನೆರವು ನೀಡಿ ಮನೆ ಕಟ್ಟಿಸಿಕೊಡಬೇಕಿದೆ ಎಂದು ತಿಳಿಸಿದರು.

ಹಾಗೆಯೇ  ರೈತರ ಸಾಲಮನ್ನಾ  ವಿಚಾರದಲ್ಲಿ ಹಿಂದಿನ ಸರ್ಕಾರದ ಕ್ರಮವನ್ನೇ ಮುಂದುವರೆಸುತ್ತೇವೆ. ಉಪಯೋಗಿವಿಲ್ಲದ ಕೆಲವು ಯೋಜನೆಗಳನ್ನ ಸ್ಥಗಿತಗೊಳಿಸಿ ಜನಪರ ಕೆಲಸ ಮಾಡುತ್ತೇವೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

Key words: Debt Relief-CM BS Yeddyurappa-gave –sweetnews- farmers