ಡಿ.22 ರಂದು ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ….

ಬೆಂಗಳೂರು,ಡಿ,17,2019(www.justkannada.in):  ರಾಜ್ಯದ ನಡೆದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ನೂತನ ಶಾಸಕರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಡಿಸೆಂಬರ್ 22 ರಂದು ನಡೆಯಲಿದೆ.

ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಡಿಸೆಂಬರ್ 22 ರಂದು ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಡಿಸೆಂಬರ್ 5 ರಂದು ನಡೆದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಓರ್ವ ಪಕ್ಷೇತರ ಗೆಲುವು ಸಾಧಿಸಿದ್ದಾರೆ.

ಹೀಗಾಗಿ ನೂತನ 15 ಶಾಸಕರು ಡಿಸೆಂಬರ್ 15 ರಂದು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

Key words: December. 22- new 17 MLAs-  sworn – Oath