ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್: ರಾಜೀನಾಮೆ ಬಗ್ಗೆ ಕಾಲಮಿತಿಯೊಳಗೆ ನಿರ್ಧರಿಸಿ- ಸ್ಪೀಕರ್ ಗೆ ಸೂಚಿಸಿ ಮಧ್ಯಂತರ ಆದೇಶ ಪ್ರಕಟಿಸಿದ ಸುಪ್ರೀಂಕೋರ್ಟ್…

ಬೆಂಗಳೂರು,ಜು,17,2019(www.justkannada.in):  ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ನಿರ್ಧಿಷ್ಟ ಕಾಲಮಿತಿಯಲ್ಲಿ ನಿರ್ಧರಿಸಬೇಕು. ಹಾಗೆಯೇ ಸದನಕ್ಕೆ ಹಾಜರಾಗುವಂತೆ ಅತೃಪ್ತ ಶಾಸಕರಿಗೆ ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ರಾಜೀನಾಮೆ ಅಂಗೀಕಾರ ವಿಳಂಬ ಪ್ರಶ್ನಿಸಿ ಸ್ಪೀಕರ್ ವಿರುದ್ದ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆ ರಂಜನ್ ಗೋಗಯ್ ನೇತೃತ್ವದ ತ್ರಿಸದಸ್ಯ ಪೀಠ ಈ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ. ಶಾಸಕರ ರಾಜೀನಾಮೆ ಬಗ್ಗೆ ನಿರ್ಧರಿಸುವುದು ಸ್ಪೀಕರ್  ವಿವೇಚನೆಗೆ ಬಿಟ್ಟಿದ್ದು. ರಾಜೀನಾಮೆ ಬಗ್ಗೆ ಸ್ಪೀಕರ್  ನಿರ್ಧಿಷ್ಟ ಕಾಲಮಿತಿಯೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹಾಗೆಯೇ ಅನರ್ಹತೆ ಬಗ್ಗೆಯೂ ಸ್ಪೀಕರ್ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿದೆ.  ಆದರೆ ಸುಪ್ರೀಂಕೋರ್ಟ್ ಕಾಲಮಿತಿ ನಿಗದಿಪಡಿಸಿಲ್ಲ.

ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್…..   

ಇದೇ ವೇಳೆ ಸುಪ್ರೀಂಕೋರ್ಟ್ ಅತೃಪ್ರ ಶಾಸಕರಿಗೆ ಬಿಗ್ ರಿಲೀಫ್ ನೀಡಿದೆ. ಅತೃಪ್ತ ಶಾಸಕರಿಗೆ ವಿಪ್ ಅನ್ವಯವಾಗಲ್ಲ.  ವಿಪ್ ಜಾರಿಗೊಳಿಸಿ ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಎಂದು ಆದೇಶ ಪ್ರಕಟಿಸಿದ್ದು ಇದೊಂದು ಮೈತ್ರಿ ಪಕ್ಷಗಳಿಗೆ ಹಿನ್ನಡೆಯಾದಂತಾಗಿದೆ.

ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧರಿಸುವವರೆಗೆ ಅತೃಪ್ತ ಶಾಸಕರಿಗೆ  ಅಧಿವೇಶನದಲ್ಲಿ ಭಾಗವಹಿಸಲು ಒತ್ತಾಯ ಮಾಡುವಂತಿಲ್ಲ. ಅದು ಶಾಸಕರ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

Key words:  Decide -about –resignation-Supreme Court – order -speaker.