ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ಧೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ.

ಬೆಂಗಳೂರು,ಜುಲೈ,22,2021(www.justkannada.in): ಎರಡು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಹೈಕಮಾಂಡ್ ಯಾವಾಗ ರಾಜೀನಾಮೆ ನೀಡಲು ಸೂಚಿಸುತ್ತಾರೆಯೋ ಅಂದು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ಹೇಳುವವರೆಗೂ ಸಿಎಂ ಆಗಿ ಇರುತ್ತೇನೆ. ಹೈಕಮಾಂಡ್ ಬೇಡವೆಂದಾಗ ರಾಜೀನಾಮೆ ನೀಡುತ್ತೇನೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟಿಸುತ್ತೇನೆ.  ಬಿಜೆಪಿ ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದರು.

ಮುಂದೆ ಯಾರನ್ನ ಸಿಎಂ ಮಾಡಬೇಕೆಂದು ಸಲಹೆ ನೀಡಲ್ಲ. ಸಿಎಂ ಸ್ಥಾನಕ್ಕೆ ಯಾರ ಹೆಸರನ್ನು ಶಿಫಾರಸ್ಸು ಮಾಡಲ್ಲ. ಅಧಿಕಾರದಲ್ಲಿ ಇರಲಿ ಇಲ್ಲದಿರಲಿ ಪಕ್ಷಕ್ಕಾಗಿ ದುಡುಯುತ್ತೇನೆ. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಈ ಮಧ್ಯೆ ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ಜುಲೈ 25ರ ಬಳಿಕ ಹೈಕಮಾಂಡ್ ನಿಂದ ಬರುವ ಸಂದೇಶಕ್ಕಾಗಿ ಕಾಯುತ್ತಿದ್ದೇನೆ. ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರ ಸೂಚನೆ ಪಾಲಿಸುವೆ ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

Key words: decided – resign- two months- ago-CM BS Yeddyurappa.