Sunday, August 23, 2026

BDA Apartments

Home Front Page ಸರ್ಕಾರಿ ನೌಕರರಿಗೆ ಶೇ.17 ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ- ಸಿಎಂ ಬೊಮ್ಮಾಯಿ ಘೋಷಣೆ.

ಸರ್ಕಾರಿ ನೌಕರರಿಗೆ ಶೇ.17 ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ- ಸಿಎಂ ಬೊಮ್ಮಾಯಿ ಘೋಷಣೆ.

ಬೆಂಗಳೂರು,ಮಾರ್ಚ್,1,2023(www.justkannada.in): 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ಹೂಡಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ.

‘ಹೌದು ಸರ್ಕಾರಿ ನೌಕರರಿಗೆ ಶೇ.17 ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಧ್ಯಂತರ ಪರಿಹಾರವಾಗಿ ಸರ್ಕಾರ ನೌಕರರಿಗೆ ಶೇ.17 ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ  ಮಾಡಲಾಗಿದೆ ಎಂದಿದ್ದಾರೆ.

ಮಧ್ಯಂತರ ಆದೇಶ ಹೊರಡಿಸಲು ಸಿದ್ದತೆ ನಡೆಯತ್ತಿದೆ. ಸರ್ಕಾರಿ ನೌಕರರ ಮುಷ್ಕರ ಹಿಂಪಡೆಯುವಂತೆ ಮನವಿ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.

Key words: Decision – 17% salary -increase – government employees- CM Bommai’s -announcement.