ಸೋಮವಾರ ಕೋರ್ಟ್ ತೀರ್ಪಿನ ಬಳಿಕ ಕಾಲೇಜು ಆರಂಭದ ಬಗ್ಗೆ ತೀರ್ಮಾನ – ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಫೆಬ್ರವರಿ,12,2022(www.justkannada.in):  ಹಿಜಾಬ್ ವಿವಾದ ಸಂಬಂಧ ಸೋಮವಾರ ಕೋರ್ಟ್ ತೀರ್ಪಿನ ಬಳಿಕ ಕಾಲೇಜು ಆರಂಭದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಲೇಜುಗಳ ಆರಂಭ ಕುರಿತು ಸೋಮವಾರ ಏನಾಗಲಿದೆ ಎಂದು ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇವೆ‌. ಕಾಲೇಜು ಆರಂಭದ ಕುರಿತು ಸಚಿವರು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ ಮೀಸಲಾತಿ ಪರುಪರೀಶಿಲನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್ ಅದೇಶ ನೀಡಿದೆ‌. ಹೀಗಾಗಿ ಅಡ್ವಕೋಟ್ ಜನರಲ್ ಜೊತೆ ಚರ್ಚ್ ಮಾಡಿ ಸಭೆ ಕರೆಯಲಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Decision –college- start- CM Basavaraja Bommai