Wednesday, August 5, 2026

BDA Apartments

Home Front Page ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಕಾನ್ಫರೆನ್ಸ್: ಲಾಕ್ ಡೌನ್ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಣೆ ಕುರಿತು...

ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಕಾನ್ಫರೆನ್ಸ್: ಲಾಕ್ ಡೌನ್ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಣೆ ಕುರಿತು ಇಂದು ನಿರ್ಧಾರ ಸಾಧ್ಯತೆ..

ಬೆಂಗಳೂರು,ಜು,13,2020(www.justkannada.in): ಕೊರೋನಾ ಹೆಚ್ಚಳ ಹಿನ್ನೆಲೆ ಈಗಾಗಲೇ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು ಲಾಕ್ ಡೌನ್ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಣೆ ಮಾಡುವ ಕುರಿತು ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.

ಜಿಲ್ಲಾಡಳಿತಗಳ ಜತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಸಂವಾದ ನಡೆಸಲಿದ್ದು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಎಸ್ಪಿ ಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಬಳಿಕ ಸಿಎಂ ಬಿಎಸ್ ವೈ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.decision-extension-lockdown-more-districts-today

ಈಗಾಗಲೇ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಗೆ ಸರ್ಕಾರ ಆದೇಶಿಸಿದೆ.  ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಿಸಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು  ಇಂದು ಸಭೆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

Key words: decision – extension – Lockdown – more districts – today.