ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ ಐಎಗೆ ವಹಿಸಲು ನಿರ್ಧಾರ.

0
1

ಬೆಂಗಳೂರು,ಜುಲೈ,29,2022(www.justkannada.in): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನ ಎನ್ ಐಎಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಹೊರರಾಜ್ಯದ ಲಿಂಕ್ ಇರುವುದರಿಂದ ಎನ್ ಐಎ ಗೆ ಹಸ್ತಾಂತರಕ್ಕೆ ನಿರ್ಧಾರ ಮಾಡಿದ್ದೇವೆ. ಕೇರಳ ಗಡಿಭಾಗದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.  ರಾಜ್ಯದ ಗಡಿ ಭಾಗದಲ್ಲಿ ಸಿಸಿ ಟಿವಿ ಅಳವಡಿಕೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು.

ಹಾಗೆಯೇ ಸ್ವಲ್ಪ ದಿನಗಳ ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಮೇಲೆ ಧಾರ್ಮಿಕ ಮುಖಂಡರ ಜತೆ ಸಭೆ ನಡೆಸಲಾಗುತ್ತದೆ. ಶೀಘ್ರದಲ್ಲೇ ಎಲ್ಲಾ ಸಮುದಾಯ ಮುಖಂಡರ ಜತೆ  ಶಾಂತಿ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Decision – handover -Praveen Nettaru- murder case – NIA.