ನಾಲ್ಕೈದು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿಂದ ತೀರ್ಮಾನ- ಡಿಸಿಎಂ ಲಕ್ಷ್ಮಣ್ ಸವದಿ…

ಕಲಬುರುಗಿ,ನವೆಂಬರ್,20,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಾಲ್ಕೈದು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ವಿಶ್ವಾಸ ವ್ಯಕ್ತಪಡಿಸಿದರು.kannada-journalist-media-fourth-estate-under-loss

ಕಲ್ಬರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷರ ಜತೆ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ. ಬಿಜೆಪಿ ಅಧ್ಯಕ್ಷರು, ಪ್ರಧಾನಿ ಮೋದಿ, ಅಮಿತ್ ಶಾ ಚರ್ಚಿಸಿ ನಾಲ್ಕೈದು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು ಸಚಿವರ ಪಟ್ಟಿ ಬರಲಿದೆ ಎಂದರು.decision-high-command-cabinet-expansion-four-days-dcm-laxman-savadi

ಸಚಿವ ಸಂಪುಟದ ಬಗ್ಗೆ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ್ ಸವದಿ, ಎಂ.ಪಿ ರೇಣುಕಾಚಾರ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಎಂ ಹಾಗೂ ಪಕ್ಷದ ಅಧ್ಯಕ್ಷರು  ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Key words: Decision -High Command – Cabinet expansion – four days-DCM -Laxman Savadi.