ಹೈಕಮಾಂಡ್ ಏನೇ ತೀರ್ಮಾನ ತೆಗೆದುಕೊಂಡರೂ ನಾನು ಬದ್ಧ-ಸಚಿವ ಕೆ.ಎಚ್ ಮುನಿಯಪ್ಪ.

ಬೆಂಗಳೂರು,ಜನವರಿ,11,2024(www.justkannada.in): ಕೋಲಾರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ವಿಚಾರ, ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ನಾನು ಬದ್ಧ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಚರ್ಚಿಸಲು ಎಲ್ಲಾ ಸಚಿವರಿಗೂ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದ್ದು ಈ ಹಿನ್ನೆಲೆಯಲ್ಲಿ ಇಂದು ಎಲ್ಲಾ ಸಚಿವರು ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದಾರೆ. ಇದಕ್ಕೂ ಮುನ್ನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಸ್ಪರ್ಧೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ. ನಿಗಮಮಂಡಳಿ ಅಧ್ಯಕ್ಷ ಸ್ಥಾನ ಕಾರ್ಯಕರ್ತರು ಮುಖಂಡರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

Key words: decision – High Command -contest – Minister -KH Muniappa