ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ- ವಿಪಕ್ಷ ನಾಯಕ ಸಿದ್ಧರಾಮಯ್ಯ….

ಬೆಂಗಳೂರು,ಸೆಪ್ಟಂಬರ್,24,2020(www.justkannada.in):  ರಾಜ್ಯ ಸರ್ಕಾರ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ ಮಾಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.jk-logo-justkannada-logo

ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ,  ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಬಿಎಸ್ ವೈ ಪುತ್ರ, ಮೊಮ್ಮಗ, ಹಾಗೂ ಅಳಿಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯಸರ್ಕಾರದ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಎಂದು ಕಿಡಿಕಾರಿದರು.decision-non-confidence-motion-against-government-opposition-leader-siddaramaiah

ರಾಜ್ಯದ ಅಭಿವೃದ್ಧಿ ಕುಂಟಿತವಾಗಿದೆ. ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ. ಸರ್ಕಾರ ಜನವಿರೋಧಿ ಕಾಯ್ದೆಗಳನ್ನ ತರುತ್ತಿದೆ.  ರಾಜ್ಯದ ಜನತೆಯ ವಿಶ್ವಾಸ ಕಳೆದುಕೊಂಡಿರುವ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತೇವೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

Key words: Decision – non-confidence -motion -against –government-Opposition leader -Siddaramaiah.