Monday, September 28, 2026

BDA Apartments

Home Front Page ಕರ್ನಾಟಕದಲ್ಲಿ ರೈಲು ಸಂಚಾರ ಕುರಿತು ಶೀಘ್ರ ನಿರ್ಧಾರ: ಕೇಂದ್ರ ಸಚಿವ ಸುರೇಶ ಅಂಗಡಿ

ಕರ್ನಾಟಕದಲ್ಲಿ ರೈಲು ಸಂಚಾರ ಕುರಿತು ಶೀಘ್ರ ನಿರ್ಧಾರ: ಕೇಂದ್ರ ಸಚಿವ ಸುರೇಶ ಅಂಗಡಿ

ಬೆಳಗಾವಿ, ಮೇ 20, 2020 (www.justkannada.in): ಕರ್ನಾಟಕದಲ್ಲಿ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಮುಂದಿನ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದಾರೆ. ಬೋರ್ಡ್‌ ಟಿಕೆಟ್‌, ಪ್ರಯಾಣದರ ಸೇರಿದಂತೆ ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರೈಲು ಪ್ರಯಾಣ ಆರಂಭಿಸಿದ ನಂತರ ಉಂಟಾಗುವ ಪರಿಣಾಮಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯದ ಜೊತೆ ಚರ್ಚಿಸಿದ ನಂತರ ರೈಲು ಸೇವೆ ಪುನಾರಂಭದ ಬಗ್ಗೆ ರೈಲ್ವೇ ಮಂಡಳಿ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಸುರೇಶ್ ಅಂಗಡಿ ತಿಳಿಸಿದ್ದಾರೆ.