ಎಸ್ ಟಿ ಮೀಸಲಾತಿ ಹೆಚ್ಚಳ ಕುರಿತು ಶೀಘ್ರ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 29, 2022 (www.justkannada.in): ಎಸ್ ಟಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಹೌದು.  ರಾಜ್ಯದಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳದ ಕುರಿತಂತೆ ಮುಖ‍್ಯಮಂತ್ರಿಗಳು ಮಹತ್ವದ ಹೇಳಿಕೆ ನೀಡಿದ್ದಾರೆ.

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಫೆಬ್ರವರಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಮಠಾಧೀಶರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಸ್ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಹೆಚ್ಚಿಸಬೇಕು ಎಂದು ವಾಲ್ಮೀಕಿ ಮಠಾಧೀಶರು ಒತ್ತಾಯಿಸಿದ್ದಾರೆ.

ಇಂದು ಪ್ರತಿಭಟನಾನಿರತರನ್ನುದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನ್ಯಾಯಮೂರ್ತಿ ಸುಭಾಷ್ ಆದಿ ಸಮಿತಿಯ ವರದಿಗಾಗಿ ಸರ್ಕಾರ ಕಾಯುತ್ತಿದೆ..’ನಾವು ಸಮುದಾಯಕ್ಕೆ ಒಳ್ಳೆಯದನ್ನು ಬಯಸುತ್ತೇವೆ. ವರದಿ ಸಿದ್ಧವಾದ ಕೂಡಲೇ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಮೀಸಲಾತಿ 50% ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ನಾನು ವಿರೋಧ ಪಕ್ಷದ ನಾಯಕರೊಂದಿಗೆ ಸಮಾಲೋಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.