ಇನ್ನೆರಡು ದಿನಗಳಲ್ಲಿ ಶಾಲೆ ಆರಂಭ ಕುರಿತು ನಿರ್ಧಾರ- ಶಿಕ್ಷಣ ಸಚಿವ ಬಿಸಿ ನಾಗೇಶ್.

ಬೆಂಗಳೂರು,ಅಕ್ಟೋಬರ್,16,2021(www.justkannada.in):  ಇನ್ನೆರಡು ದಿನಗಳಲ್ಲಿ 1ರಿಂದ 5ನೇ ತರಗತಿ ಆರಂಭದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಪುನರಾರಂಭ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೋನಾ ಹಿನ್ನೆಲೆ  ಶಾಲೆ ತಡವಾಗಿ ಆರಂಭವಾಗುತ್ತಿದೆ. ಹೀಗಾಗಿ ಶನಿವಾರ, ಭಾನುವಾರವೂ ತರಗತಿ ನಡೆಸುವ ಬಗ್ಗೆ ಚಿಂತನೆ  ಇದೆ ಎಂದು ತಿಳಿಸಿದರು.

1 ರಿಂದ 5ನೇ ತರಗತಿ ಪುನರಾರಂಭ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿಯೇ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಜ್ಞರು, ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ನೀಡುವಂತಹ  ಸಲಹೆ ಆಧರಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ತಡವಾಗಿ ಶಾಲೆಗಳು ಆರಂಭವಾಗುತ್ತಿದ್ದರೂ ಪಠ್ಯ ಕ್ರಮ ಕಡಿತದ ಕುರಿತಂತೆ ಯಾವುದೇ ನಿರ್ಧಾರ ಕೈಗೊಳ್ಳುವಂತ ಚಿಂತನೆ ಇಲ್ಲ. ಪಠ್ಯ ಕ್ರಮ ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸೋದಕ್ಕಾಗಿ ಶನಿವಾರ ಹಾಗೂ ಭಾನುವಾರವೂ ತರಗತಿ ನಡೆಸೋ ಚಿಂತನೆಯಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

Key words: Decision – school -commencement – two days-Education Minister- BC Nagesh.