ವಿಶ್ವಾಸ ಮತಯಾಚನೆ ಮಾಡಲು ನಿರ್ಧಾರ-  ಸ್ಪೀಕರ್ ಬಳಿ ಸಮಯ ಕೇಳಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಜು,12,2019(www.justkannada.in):  ರಾಜ್ಯದ ಮೈತ್ರಿ ಸರ್ಕಾರದ 16 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಈ ನಡುವೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿದ್ದಾರೆ.

ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಿದ್ದು ಸದನದಲ್ಲಿ ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಲು ನಿರ್ಧಾರ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚನೆ ವೇಳೆ, ವಿಶ್ವಾಸ ಮತಯಾಚನೆ ಮಂಡಿಸಲು ನಿರ್ಧರಿಸುವುದಾಗಿ ಘೋಷಿಸಿದ್ದಾರೆ. ಇದಕ್ಕೆ ಸ್ಪೀಕರ್ ರಮೆಶ್ ಕುಮಾರ್ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಸದನದಲ್ಲಿ ಮಾತನಾಡಿದ ಸಿಎಂ ಹೆಚ್.ಡಿಕೆ, ಅನಿವಾರ್ಯವಾಗಿದ್ದಾಗ ಮಾತ್ರ ಈ ಮಾತು ಹೇಳುತ್ತೇನೆ.  ಸದನದಲ್ಲಿ ಬೆಂಬಲವಿದ್ದಾಗ ಮಾತ್ರ ನಾನು ಈ ಸ್ಥಾನದಲ್ಲಿರಬಹುದು. ನಾನು ಶಾಶ್ವತವಾಗಿ ಕೂರುವುದಿಲ್ಲ. ಹೀಗಾಗಿ ವಿಶ್ವಾಸ ಮತಯಾಚನೆ ಮಾಡಲು ನಾನು ನಿರ್ಧರಿಸಿದ್ದೇನೆ. ಹೀಗಾಗಿ  ನನಗೆ ಸಮಯ ನೀಡಿ ಎಂದು ಸ್ಪೀಕರ್ ಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

 

Key words:  decision – vote – confidence- CM HD Kumaraswamy -time – speaker.