ರಾಜ್ಯ ವಿಧಾನಮಂಡಲ ಅಧಿವೇಶನ ಮೊಟಕುಗೊಳಿಸಲು ನಿರ್ಧಾರ

ಬೆಂಗಳೂರು,ಡಿಸೆಂಬರ್,08,2020(www.justkannada.in) : ಗ್ರಾಮಪಂಚಾಯತ್ ಚುನಾವಣೆ ಮತ್ತು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಡಿಸೆಂಬರ್ 10 ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ಮಂಗಳವಾರ ತೀರ್ಮಾನಿಸಿದೆ.logo-justkannada-mysoreಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮೊದಲ ದಿನವೇ ಸದನದಲ್ಲಿ ಖುರ್ಚಿಗಳು ಖಾಲಿ ಖಾಲಿ

ನಿನ್ನೆಯಿಂದ ಆರಂಭವಾಗಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ಕಲಾಪದ ಮೊದಲ ದಿನವೇ ಸದನದಲ್ಲಿ ಖುರ್ಚಿಗಳು ಖಾಲಿ ಖಾಲಿಯಾಗಿದ್ದವು. ಹಲವು ಸಚಿವರು, ಆಡಳಿತ ಹಾಗೂ ವಿಪಕ್ಷಗಳ ಅನೇಕ ಸದಸ್ಯರು ಸದನಕ್ಕೆ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಗ್ರಾಪಂ ಚುನಾವಣೆ, ಕೊರೋನಾ ಹಿನ್ನೆಲೆ ಅಧಿವೇಶನ ನಾಲ್ಕೇ ದಿನಕ್ಕೆ ಮುಕ್ತಾಯ

ಡಿಸೆಂಬರ್ 15ರ ವರೆಗೆ ಅಧಿವೇಶನ ನಡೆಯಬೇಕಿತ್ತು. ಆದರ,  ಗ್ರಾಮ ಪಂಚಾಯ್ತಿ ಚುನಾವಣೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮುಕ್ತಾಯಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

 Decision-curtail-state-legislative-session

english summary…

State assembly session days reduced
Bengaluru, Dec.8, 2020 (www.justkannada.in): The Assembly session advisory committee has decided to reduce the session till December 10 following the COVID-19 pandemic.Decision-curtail-state-legislative-session
It was decided today in the session advisory committee meeting held under the leadership of speaker Vishweshwara Hegde Kageri.
The session was to be held till December 15, has been reduced due to the gram panchayat elections and corona fear.
Keywords: Assembly session duration reduced/ speaker

key words : Decision-curtail-state-legislative-session