ಜ.22ರಂದು ರಾಜ್ಯದಲ್ಲೂ ರಜೆ ಘೋಷಣೆ ಮಾಡಿ –ಸರ್ಕಾರಕ್ಕೆ ಕೆ.ಎಸ್ ಈಶ್ವರಪ್ಪ ಆಗ್ರಹ.

ಶಿವಮೊಗ್ಗ, ಜನವರಿ,19,2024(www.justkannada.in): ಜನವರಿ 22 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಂದು ರಾಜ್ಯದಲ್ಲೂ ರಜೆ ಘೋಷಣೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಜನವರಿ 22 ರಂದು ರಾಜ್ಯದಲ್ಲೂ ರಜೆ ಘೋಷಣೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ರಾಜ್ಯದ ಜನರು ಮನೆಯಿಂದಲೇ ಕೂತು ನೋಡಲಿ. ಮುಸ್ಲೀಮರೂ ಅಯೋಧ್ಯೆಗೆ ಬರುತ್ತಿದ್ದಾರೆ. ರಾಮನ ವಿಷಯದಲ್ಲಿ ರಾಜಕೀಯ ಬೇಡ ಎಂದರು.

ಸಿಎಂ ಸಿದ್ದರಾಮಯ್ಯ ಮತ್ತು ಸಂಸದ ಅನಂತ್ ಕುಮಾರ್ ಹೆಗಡೆ ನಡುವೆ ಟಾಕ್ ವಾರ್ ಕುರಿತು ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ನಾಲ್ಕೈದು ದಿನ ನೀವು ಟೀಕೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಅನಂತ್ ಕುಮಾರ್ ಹೆಗಡೆಯವರಿಗೆ ಪ್ರಾರ್ಥನೆ ಮಾಡುತ್ತೇನೆ. ಅನಂತ್ ಕುಮಾರ್ ಹೆಗಡೆ ಒಬ್ಬ ದೇಶ ಭಕ್ತ, ದೈವ ಭಕ್ತ. ಆದರೆ ನಾಲ್ಕೈದು ದಿನ ಟೀಕೆ ಮಾಡುವುದು ಬೇಡ ಎಂದರು.

Key words: Declare – holiday – state – January 22 – KS Eshwarappa- demands-government.