ಬಿಜೆಪಿ ಅವನತಿ ಕರ್ನಾಟಕದಿಂದಲೇ ಶುರು – ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,14,2023(www.justkannada.in):  ಬಿಜೆಪಿ ಅವನತಿ ಕರ್ನಾಟಕದಿಂದಲೇ ಶುರುವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೆ ಕುಸಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಸೇಡಂನಲ್ಲಿ ಪ್ರಚಾರ ಮಾಡಿದರು. ಆದರೆ ಸೇಡಂನಲ್ಲಿ ಕಾಂಗ್ರೆಸ್​ 45 ಸಾವಿರ ಮತಗಳ ಅಂತರದಲ್ಲಿ ಗೆದ್ದಿತು. ನಾವು ಜನರಿಗೆ ಹಣ ನೀಡುತ್ತೇವೆ. ಆದರೆ ಬಿಜೆಪಿ ಜನರ ಜೇಬಿನಿಂದ ಹಣ ಕಿತ್ತುಕೊಂಡರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ಮಾಡಿದರು.

ಈ ಬಾರಿ ನಮ್ಮ ಪಕ್ಷ ಶೇ.42.9ರಷ್ಟು ಮತ ಪಡೆದುಕೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಕ್ಷ ಗೆದ್ದಿದೆ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಯಾವತ್ತೂ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿ 2 ಬಾರಿಯೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ ಎಂದು  ಸಿಎಂ ಸಿದ್ದರಾಮಯ್ಯ  ಹೇಳಿದರು.

Key words: decline – BJP -started – Karnataka -CM Siddaramaiah