ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆ: ಒಂದೇ ದಿನದಲ್ಲಿ 37,154 ಹೊಸ ಕೋವಿಡ್ ಪ್ರಕರಣ ಪತ್ತೆ.

ನವದೆಹಲಿ,ಜುಲೈ,12,2021(www.justkannada.in):  ದೇಶದಲ್ಲಿ  ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದ್ದು, ಇದೀಗ ಕಳೆದ 24 ಗಂಟೆಗಳ ಅವಧಿಯಲ್ಲಿ  37,154 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ.jk

ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 724 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 37,154 ಹೊಸದಾಗಿ ಸೋಂಕು  ಪತ್ತೆಯಾಗಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,08,74,376ಕ್ಕೆ ತಲುಪಿದೆ. ಕೋವಿಡ್ ನಿಂದ ಸಾವಿನ ಸಂಖ್ಯೆ 4,08,764ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,50,899ಕ್ಕೆ ಕುಸಿದಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 39,649 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,00,14,713ಕ್ಕೆ ತಲುಪಿದೆ.

 

Key words: Decrease – coronavirus- prevalence – country.