ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ.

ನವದೆಹಲಿ,ಫೆಬ್ರವರಿ,13,2022(www.justkannada.in):  ದೇಶದಲ್ಲಿ  ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ  44,877  ಮಂದಿಗೆ ಸೋಂಕು ತಗುಲಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಕೊರೋನಾಗೆ 684  ಮಂದಿ  ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,08,665ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 5,37,045 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11,7,591 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 4,15,85,711 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಪ್ರತಿನಿತ್ಯದ ಕೋವಿಡ್ ದರ  ಶೇ. 3.17ರಷ್ಟಿದೆ.

Key words: decrease -Covid -country.