ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣದಲ್ಲಿ ಇಳಿಕೆ: ಕಳೆದ 24 ಗಂಟೆಯಲ್ಲಿ 1.86 ಲಕ್ಷ ಜನರಿಗೆ ಸೋಂಕು…

ನವದೆಹಲಿ,ಮೇ,28,2021(www.justkannada.in):  ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣದಲ್ಲಿ ಇಳಿಕೆಯಾಗುತ್ತಿದ್ದು ಪ್ರತಿದಿನ 2 ಲಕ್ಷ ಗಡಿ ದಾಟುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ.  ಕಳೆದ 24 ಗಂಟೆಯಲ್ಲಿ 1.86 ಲಕ್ಷ ಜನರಿಗೆ ಸೋಂಕು ತಗುಲಿದೆ.jk

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,86,364 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,75,55,457ಕ್ಕೆ ಏರಿಕೆಯಾಗಿದೆ.326098-covid-cases-registered-single-day-country

ಕಳೆದ 24 ಗಂಟೆಯಲ್ಲಿ 3,660  ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,18,895ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 23,43,152 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,48,93,410 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,59,459 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

 

Key words: decrease – daily- Covid- case-  1.86 lakh -people –corona- single day