ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ, ಮಹಾರಾಷ್ಟ್ರದಲ್ಲಿ ಗಣನೀಯ ಏರಿಕೆ

ಬೆಂಗಳೂರು, ಸೆಪ್ಟೆಂಬರ್ 10, 2021 (www.justkannada.in): ಕೇರಳದಲ್ಲಿ ಗುರುವಾರ ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ.

ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಕಡಿಮೆಯಾಗಿದೆ.

ಭಾರತದಲ್ಲಿ ಗುರುವಾರ ಒಟ್ಟು 39,249 ಹೊಸ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 26,200ಕ್ಕೆ ಇಳಿದಿದೆ.

ಕರ್ನಾಟಕದಲ್ಲಿ 30196 ಪ್ರಕರಣ ದಾಖಲಾಗಿತ್ತು. ದೈನಿಕ ಪಾಸಿಟಿವಿಟಿ ದರ ಶೇಕಡ 19ರಿಂದ 16.69ಕ್ಕೆ ಕಡಿಮೆಯಾಗಿದೆ. ಏಳು ದಿನಗಳ ದೈನಿಕ ಸರಾಸರಿ ಕೂಡಾ ಕೇರಳದಲ್ಲಿ ಇಳಿಕೆಯಾಗುತ್ತಿದೆ.

ಈ ಮಧ್ಯೆ ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆಯಾಗಿದ್ದು, 4219 ಪ್ರಕರಣಗಳು ವರದಿಯಾಗಿವೆ.

key words:  Decrease in number of Covid cases in Kerala