ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್  ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ.

ಬೆಂಗಳೂರು,ನವೆಂಬರ್,4,2021(www.justkannada.in):  ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್  ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಕ್ರಮವಾಗಿ ರೂ 10 ಹಾಗೂ ರೂ 5 ಕ್ಕೆ ಇಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ತಲಾ 7 ರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.

ಇದೀಗ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ. ಈಗ ರಾಜ್ಯದಲ್ಲಿ ಪೆಟ್ರೋಲ್ ದರ 100.63, ಡೀಸೆಲ್ ಬೆಲೆ  85.03 ಕ್ಕೆ ಬರಲಿದೆ ಒಟ್ಟಾರೆ ಪೆಟ್ರೋಲ್ ಮೇಲೆ 13.30 ರೂ ಕಡಿತವಾಗಲಿದೆ. ಡಿಸೇಲ್ ಮೇಲೆ 19.47 ರೂ ಕಡಿತವಾಗಲಿದೆ.

Key words: Decrease -VAT -petrol diesel –state-order