ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್

ಗುಜರಾತ್,ಮೇ,2,2023(www.justkannada.in):  ಪ್ರಧಾನಿ ಮೋದಿ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ   ತಮ್ಮ ವಿರುದ್ಧ ನೀಡಲಾಗಿದ್ದ  ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

2019 ರ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ದೋಷಾರೋಪಣೆಯ ನಂತರ, ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ನ ಮೊರೆ ಹೋಗಿದ್ದರು. ಗುಜರಾತ್ ಹೈಕೋರ್ಟ್ ಮಂಗಳವಾರ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಯನ್ನು ನಿರಾಕರಿಸಿದೆ. ರಜೆಯ ನಂತರ ಜೂನ್‌ನಲ್ಲಿ ತೀರ್ಪು ನೀಡುವುದಾಗಿ ನ್ಯಾಯಾಲಯ ಹೇಳಿದೆ.

Key words: Defamation case-Gujarat -High Court -refuses – interim protection -Rahul Gandhi