ಸೋಲು ಗೆಲುವು ಬಿಜೆಪಿಗೆ ಹೊಸದೇನೂ ಅಲ್ಲ: ಗೌರವಯುತವಾಗಿ ಸ್ವೀಕರಿಸುತ್ತೇವೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಮೇ,13,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಈ ಬಾರಿ 65 ಕ್ಷೇತ್ರಗಳನ್ನಷ್ಟೇ ಗೆಲ್ಲಲು ಶಕ್ತವಾಯಿತು. ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸೋಲು ಗೆಲುವು ಬಿಜೆಪಿಗೆ ಹೊಸದೇನೂ ಅಲ್ಲ ಸೋಲನ್ನ ಗೌರವಯುತವಾಗಿ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಸೋಲಿನ ಕುರಿತು ಬೆಂಗಳೂರಿನಲ್ಲಿ ಮಾತಾನಾಡಿದ ಬಿಎಸ್ ಯಡಿಯೂರಪ್ಪ, ಜನತೆ ನೀಡಿದ ತೀರ್ಪನ್ನು ಗೌರವಯುತ ಮತ್ತು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸುತ್ತೇವೆ. ಕೇವಲ ಎರಡು ಸ್ಥಾನಗಳಿಂದ ಅರಂಭಿಸಿ ಸ್ವಂತ ಬಲದಲ್ಲಿ ಸರ್ಕಾರ ರಚಿಸುವಷ್ಟು ಬಿಜೆಪಿ ಪಕ್ಷ ಬೆಳೆದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ  ನೇತೃತ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೂ ಸಹ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುತ್ತದೆ ಎಂದು  ಬಿಎಸ್ ಯಡಿಯೂರಪ್ಪ ಹೇಳಿದರು.

Key words: Defeat – nothing -new –BJP-  Former CM- BS Yeddyurappa.