ಸೆಂಟ್ರಲ್ ವಿಸ್ತಾ ಕಾಮಗಾರಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್…

ದೆಹಲಿ,ಮೇ,31,2021(www.justkannada.in):  ಕೊರೋನಾ ಸೋಂಕಿನ ಉಲ್ಬಣವಾಗುತ್ತಿರುವ ವೇಳೆಯೂ ನಡೆಸಲಾಗುತ್ತಿರುವ ಸೆಂಟ್ರಲ್ ವಿಸ್ತಾ ಕಾಮಗಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿಲಾಗಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.jk

 ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಗೆ ನಿರ್ಮಾಣ ಕಾರ್ಯಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.  ಈ ಕುರಿತಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದಂತ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತೆ ದೆಹಲಿ ಹೈಕೋರ್ಟ್, ಸೆಂಟ್ರಲ್ ವಿಸ್ತಾ ಕಾಮಗಾರಿಗೆ ಒಪ್ಪಿಗೆ ನೀಡಿದೆ.

ಕಾಮಗಾರಿಗೆ ತಡೆ ನೀಡುವ ಪ್ರಶ್ನೆಯೇ ಇಲ್ಲ. ಕಾರ್ಮಿಕರು ಸ್ಥಳದಲ್ಲಿಯೇ ಇದ್ದು ಕಾಮಗಾರಿ ನಡೆಸಬಹುದು ಎಂದು ಕೋರ್ಟ್ ತಿಳಿಸಿದೆ. ಅಲ್ಲದೆ ಅರ್ಜಿದಾರರಿಗೆ 1 ಲಕ್ಷ ರೂ ದಂಡವನ್ನೂ ವಿಧಿಸಿದೆ.

Key words: dehli-high  court -dismissed – application -stay -Central Vista-work