ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ಹಿನ್ನೆಲೆ:ಸ್ಪೀಕರ್ ವಿರುದ್ದ ಸುಪ್ರೀಂಕೋರ್ಟ್ ಮೊರೆ ಹೋದ ಅತೃಪ್ತ ಶಾಸಕರು…

ಬೆಂಗಳೂರು,ಜು,10,2019(www.justkannada.in):  ರಾಜೀನಾಮೆಯನ್ನ ಅಂಗೀಕರಿಸಲು ವಿಳಂಬ ಮಾಡುತ್ತಿರುವ ಹಿನ್ನೆಲೆ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನಮ್ಮ ರಾಜೀನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯನ್ನ ಸುಪ್ರೀಂಕೋರ್ಟ್ ಸಿಜೆ ಪೀಠದಲ್ಲಿ ನಾಳೆ ವಿಚಾರಣೆ ನಡೆಯಲಿದೆ.

Key words: Delayed – acceptance – resignation-Dissatisfied- MLAs -Supreme Court