Monday, September 21, 2026

BDA Apartments

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ BDA JK_Adv BDA Adv
Home Crime ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ.

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ.

ನವದೆಹಲಿ,ಫೆಬ್ರವರಿ,27,2023(www.justkannada.in):  ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನ ಐದು  ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ.

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನಿನ್ನೆ ಬಂಧಿಸಿದ್ದ ಸಿಬಿಐ ನಂತರ ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರ ಮುಂದೆ ಸಿಸೋಡಿಯಾ ಅವರನ್ನು ಹಾಜರುಪಡಿಸಿ  ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಮನವಿ ಮಾಡಿತ್ತು.

ಇದಕ್ಕೆ ಒಪ್ಪಿದ ಕೋರ್ಟ್  ಮನೀಶ್ ಸಿಸೋಡಿಯಾ ಅವರನ್ನ ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ.

Key words: Delhi –DCM- Manish Sisodia – CBI -custody – five days.