“ದೆಹಲಿ ರೈತರ ಹೋರಾಟ ಬೆಂಬಲಿಸಿ, ಫೆ.6ರಂದು ರಸ್ತೆ ಬಂದ್ ಚಳುವಳಿ” : ರೈತ ಮುಖಂಡ ಕುರುಬೂರು ಶಾಂತಕುಮಾರ್

ಮೈಸೂರು,ಫೆಬ್ರವರಿ,03,2021(www.justkannada.in) : ದೆಹಲಿ ರೈತರ ಹೋರಾಟ ಬೆಂಬಲಿಸಿ ಫೆಬ್ರವರಿ 6 ರಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ 2 ಗಂಟೆವರೆಗೆ ರಸ್ತೆ ಬಂದ್ ಚಳುವಳಿ ನಡೆಸಲು ನಿರ್ಧರಿಸಲಾಗಿದೆ. ಈ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.jkದೆಹಲಿ ರೈತರ ಹೋರಾಟದ ಕರೆಗೆ ಬೆಂಬಲಿಸಿ ಫೆ.6ರಂದು ರಾಜ್ಯಾದ್ಯಂತ ರಸ್ತೆತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರಕಾರ ಪೊಲೀಸ್ ಬಲದ ಮೂಲಕ ಸಾಕಷ್ಟು ಕಿರುಕುಳ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಶಾಂತಿಯುತ ಹೋರಾಟಕ್ಕೆ ರಾಷ್ಟ್ರ ಮಟ್ಟದ ಕಿಸಾನ್ ಸಂಯುಕ್ತ ಮೋರ್ಚಾ ಕರೆ

ಕೇಂದ್ರ ಸರ್ಕಾರ ಚಳವಳಿ ನಿರತ ರೈತರ ಜೊತೆ ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ನೀಡುತ್ತಿದೆ. ಚಳುವಳಿ ನಡೆಯುತ್ತಿರುವ ಜಾಗದಲ್ಲಿ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಿ, ರಸ್ತೆಗಳಿಗೆ ಮುಳ್ಳುತಂತಿ ಬೇಲಿ ಹಾಕಿದೆ. ಇದು ಸರ್ಕಾರದ ಇಬ್ಬಗೆಯ ನೀತಿ ತೋರಿಸುತ್ತಿದೆ. ಇದರ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ರಾಷ್ಟ್ರ ಮಟ್ಟದ ಕಿಸಾನ್ ಸಂಯುಕ್ತ ಮೋರ್ಚಾ ನೀಡಿರುವ ಕರೆ ಮೇರೆಗೆ ರಾಜ್ಯದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯಹೋರಾಟವು ರಸ್ತೆ ಬಂದ್ ಚಳುವಳಿ ನಡೆಸಲು ತೀರ್ಮಾನಿಸಿದೆ ಎಂದಿದ್ದಾರೆ.

ರೈತರು, ಮಾಧ್ಯಮದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಖಂಡನೀಯ

ಪ್ರತಿಭಟನಾ ನಿರತ ರೈತರ ಮೇಲೆ ಹಾಗೂ ಈ ಹೋರಾಟದ ಬಗ್ಗೆ ವರದಿ ಮಾಡುತ್ತಿದ್ದ ವರದಿಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಖಂಡನೀಯ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿಯು ಸಹ ಇಂತಹ ಅತಿರೇಕದ ಕಾರ್ಯ ನಡೆದಿಲ್. ಇದು ಜನತಂತ್ರ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿ Delhi-farmers-Fight-Support-Feb.6-Road Bandh-Movement-Farmer-leader-Kuruburu Shanthakumar

ಕೇಂದ್ರ ಸರ್ಕಾರ ಜಾರಿ ಮಾಡಿರುವ ಕಾಯ್ದೆಗಳನ್ನು ವಾಪಸ್ ಪಡಯಬೇಕು ಕೃಷಿ ಉತ್ಪನ್ನಗಳಿಗೆ ಶಾಸನ ಬದ್ದ ಖಾತರಿ ಬೆಂಬಲ ಬೆಲೆ ನಿಗದಿ ಮಾಡುವ ವ್ಯವಸ್ಥೆ  ಜಾರಿಯಾಗಬೇಕು ಎಂಬುದು ನಮ್ಮ ರೈತ ಸಂಘಟನೆಗಳು ಒತ್ತಾಯ ಎಂದು ತಿಳಿಸಿದ್ದಾರೆ.

key words : Delhi-farmers-Fight-Support-Feb.6-Road Bandh-Movement-Farmer-leader-Kuruburu Shanthakumar