ಜ.22 ರಂದು ಅರ್ಧ ದಿನ ರಜೆ ಘೋಷಿಸಿದ ದೆಹಲಿ ಸರ್ಕಾರ.

ನವದೆಹಲಿ,ಜನವರಿ,20,2024(www.justkannada.in): ಅಯೋಧ್ಯೆಯಲ್ಲಿ  ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22 ರಂದು ದೆಹಲಿ ಸರ್ಕಾರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ  ಘೋಷಣೆ ಮಾಡಿದೆ.

ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹಲವು ರಾಜ್ಯಗಳಲ್ಲಿ  ಅಂದು ರಜೆ ಘೋಷಣೆ ಮಾಡಲಾಗಿದೆ. ಹಾಗೆಯೇ ಕೇಂದ್ರ ಸರ್ಕಾರವೂ ಕೂಡ ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ.  ಇದೀಗ ದೆಹಲಿ ಸರ್ಕಾರವೂ ಜನವರಿ 22 ರಂದು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ನೀಡಿದೆ ಎನ್ನಲಾಗಿದೆ.

ಜನವರಿ 22 ರಂದು ಎಲ್ಲಾ ಸರ್ಕಾರಿ ಕಚೇರಿಗಳು, ನಗರ ಸ್ಥಳೀಯ ಸಂಸ್ಥೆಗಳು (ಯುಎಲ್ಬಿ), ಸ್ವಾಯತ್ತ ಸಂಸ್ಥೆಗಳು, ಉದ್ಯಮಗಳು ಮತ್ತು ಮಂಡಳಿಗಳನ್ನು ಅರ್ಧ ದಿನ ಮುಚ್ಚಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ.

Key words: Delhi government-announced -half-day -holiday -January 22.