ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ- ಮಹಾಘಟಬಂಧನ್ ವಿರುದ್ಧ ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ..

ಬೆಂಗಳೂರು,ಜುಲೈ,17,2023(www.justkannada.in): ಇಂದು ಬೆಂಗಳೂರಿನಲ್ಲಿ ಮಹಾಮೈತ್ರಿಕೂಟ ಸಭೆ ಆಯೋಜಿಸಿದ್ದು ಈ ನಡುವೆ ಮಹಾಘಟಬಂದನ್ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರು, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ ಎಂದರು.

ಎನ್​ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ  ಹೆಚ್.ಡಿಕೆ, ಇನ್ನೂ ದಿನಗಳಿವೆ ನೋಡೊಣ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಹೇಳಿದರು.

Key words: delusion – JDS – drowned- Former CM- HD Kumaraswmy- against -Mahaghatabandhan.