Friday, August 7, 2026

BDA Apartments

Home Front Page ಡಿಸಿಎಂ ಸ್ಥಾನಕ್ಕೆ ಬೇಡಿಕೆ ವಿಚಾರ: ಶಾಸಕ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಹೀಗೆ…

ಡಿಸಿಎಂ ಸ್ಥಾನಕ್ಕೆ ಬೇಡಿಕೆ ವಿಚಾರ: ಶಾಸಕ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ಜು,25,2019(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ವೇಳೆ ತಮಗೆ ಡಿಸಿಎಂ ಸ್ಥಾನ ನೀಡುವಂತೆ ಬೇಡಿಕೆ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಶ್ರೀರಾಮುಲು, ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ರಾಜ್ಯಾಧ್ಯಕ್ಷರು, ಬಿಎಸ್ ವೈ ಅವರ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ.

ಮಾಧ್ಯಮಗಳ ಜತೆ ಇಂದು ಮಾತನಾಡಿದ ಬಿಜೆಪಿ ಶಾಸಕ ಶ್ರೀರಾಮುಲು, ರಾಜ್ಯದಲ್ಲಿ ಸರ್ಕಾರ ರಚನೆ ಸಂಬಂಧ ಹೈಕಮಾಂಡ್ ಜತೆ ಬಿಜೆಪಿ ನಿಯೋಗ ಚರ್ಚೆ ಮಾಡುತ್ತಿದೆ. ಶೀಘ್ರದಲ್ಲೇ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ.  ಶೀಘ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಅತೃಪ್ತರ ಅನರ್ಹತೆ ಬಗ್ಗೆ ನಿರ್ಧಾರವಾಗಿಲ್ಲ.  ಬಿಎಸ್ ವೈ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಅತೃಪ್ತ ಶಾಸಕರು ಬೆಂಗಳೂರಿಗೆ ಬರಲ್ಲ ಎಂದು ಶ್ರೀರಾಮುಲು ತಿಳಿಸಿದರು. ಹಾಗೆಯೇ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ಬಿಜೆಪಿ ಅಧ್ಯಕ್ಷರು ಬಿಎಸ್ ವೈ ತೀರ್ಮಾನಕ್ಕೆ ನಾನು ಬದ್ಧ.  ಯಾರಿಗೆ ಯಾವ ಯಾವ ಹುದ್ದೆ ಅಂತಾ ನಿರ್ಧಾರ ಆಗುಲ್ಲ ಎಂದರು.

ಇನ್ನು ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಶ್ರೀರಾಮಲು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರಲ್ಲ. ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಹತಾಶೆಯಿಂದ ಹಲವು ವಿಚಾರಗಳನ್ನ ಹರಿಬಿಡುತ್ತಿದ್ದಾರೆ ಎಂದು ಟೀಕಿಸಿದರು.

Key words: Demand –DCM- position-bjp mla-Sriramulu -reaction