Friday, August 14, 2026

BDA Apartments

Home Front Page ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಸುವರ್ಣಸೌಧದ ಬಳಿ ರೈತರಿಂದ ಪ್ರತಿಭಟನೆ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಸುವರ್ಣಸೌಧದ ಬಳಿ ರೈತರಿಂದ ಪ್ರತಿಭಟನೆ.

ಬೆಳಗಾವಿ,ಡಿಸೆಂಬರ್,7,2023(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ನೂರಾರು ರೈತರು ಪ್ರತಿಭಟನೆ ನಡೆಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದ ಚೆನ್ನಮ್ಮ ವೃತ್ತದಿಂದ ಮೆರವಣಿಗೆ ಮೂಲಕ ಆಗಮಿಸಿದ ರೈತರು ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ 4ಕ್ಕೆ ನುಗ್ಗಲು ಯತ್ನಿಸಿದ್ದು ಪ್ರತಿಭಟನಾನಿರತ ರೈತರನ್ನ ಚದುರಿಸಲು ಪೊಲೀಸರು ಹರಸಾಹಸಪಟ್ಟರು.

ಪ್ರತಿಭಟನಾ ಸ್ಥಳಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿದ್ದು, ಸಚಿವ ಶಿವಾನಂದ್ ಪಾಟೀಲ್ ಸಾಥ್ ನೀಡಿದ್ದಾರೆ.

Key words: Demand-Protest – farmers –near- Suvarnasoudha