Thursday, August 13, 2026

BDA Apartments

Home Front Page ಆದಷ್ಟು ಬೇಗ ಸಾರಿಗೆ ನೌಕರರ ಎಲ್ಲಾ ಬೇಡಿಕೆ ಈಡೇರಿಕೆ- ಡಿಸಿಎಂ ಲಕ್ಷ್ಮಣ್ ಸವದಿ…

ಆದಷ್ಟು ಬೇಗ ಸಾರಿಗೆ ನೌಕರರ ಎಲ್ಲಾ ಬೇಡಿಕೆ ಈಡೇರಿಕೆ- ಡಿಸಿಎಂ ಲಕ್ಷ್ಮಣ್ ಸವದಿ…

ಬೆಂಗಳೂರು,ಜನವರಿ,7,2021(www.justkannada.in):   ಆದಷ್ಟು ಬೇಗ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳನ್ನ ಈಡೇರಿಸುತ್ತೇವೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.jk-logo-justkannada-mysore

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,  ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ ಮಾಡಲಾಗಿದೆ. ಸಮಿತಿ ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಆದಷ್ಟು ಬೇಗ ಸಾರಿಗೆ ನೌಕರರ ಬೇಡಿಕೆಗಳನ್ನ ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.demands - transport workers – fulfilled- soon- DCM -Laxman Savadi.

ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವುದು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇತ್ತೀಚೆಗೆ ಸಾರಿಗೆ ನೌಕರರು ರಾಜ್ಯಾದ್ಯಂತೆ ಸಾರಿಗೆ ಸಂಚಾರ ಬಂದ್ ಮಾಡಿ  ನಾಲ್ಕು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ ಮಾತುಕತೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು.

Key words:  demands – transport workers – fulfilled- soon- DCM -Laxman Savadi.