ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು,ಜುಲೈ,10,2024 (www.justkannada.in): ಬೆಂಗಳೂರು  ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿರುವ   ಕರ್ನಾಟಕ ಹೈಕೋರ್ಟ್  ಸ್ವಯಂಪ್ರೇರಿತವಾಗಿ ಪಿಐಎಲ್‌ ದಾಖಲಿಸಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾ. ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಸ್ವಯಂಪ್ರೇರಿತವಾಗಿ ಪಿಐಎಲ್‌ ದಾಖಲಿಸಿಕೊಂಡು ವಿಚಾರಣೆ ನಡೆಸಿದೆ.  ಡೆಂಗ್ಯೂ ಹೆಚ್ಚಳ ಸಂಬಂಧ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಬೇಕಾದ ಅಗತ್ಯವಿದೆ ಎಂಬುದಾಗಿ ವ್ಯಕ್ತಿಯೊಬ್ಬರು ಬರೆದಿದ್ದ ಸಂಪಾದಕರಿಗೆ ಪತ್ರ ಅಂಕಣದ ವರದಿಯನ್ನು ಪ್ರಸ್ತಾಪಿಸಿತು. ಜೊತೆಗೆ, ಇತರೆ ಪತ್ರಿಕೆಗಳ ವರದಿಯನ್ನೂ ಉಲ್ಲೇಖಿಸಿ ಅರ್ಜಿ ದಾಖಲಿಸಿಕೊಂಡಿದೆ.

ಹಾಗೆಯೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿ ಮಾಡಿ, ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದರು.

Key words: Dengue, state, High Court, voluntary, PIL