ರೈತರಿಗೆ ಗುಡ್ ನ್ಯೂಸ್: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ – 2023 ಆಪ್ ಬಿಡುಗಡೆ

ಮೈಸೂರು,ಡಿಸೆಂಬರ್,27,2023(www.justkannada.in): 2023-24ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದ ಭಾಗವಾಗಿ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ಪ್ರಸಕ್ತ ಸಾಲಿನ ಹಿಂಗಾರು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬಿಡುಗಡೆ ಮಾಡಿದೆ.

ಅಪ್ಲಿಕೇಶನ್ ಅನ್ನು ಬಳಸಿಕೊಂಡು ಸ್ವತಃ ರೈತರೇ ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳ ಸಮೀಕ್ಷೆಯನ್ನು ಮಾಡಿ ವಿವರಗಳನ್ನು ಅಪ್ಲೋಡ್ ಮಾಡಬಹುದಾಗಿದೆ.

ಅಪ್ಲಿಕೇಶನ್ ವೈಶಿಷ್ಟ್ಯಗಳು…

ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರ ನಿಖರವಾಗಿ ದಾಖಲಿಸಬಹುದು. ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ, ಕೃಷಿ ಸಾಲ ಸೌಲಭ್ಯ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ರೈತರಿಗೆ ಒದಗಿಸಲು ಮತ್ತು ಆರ್.ಟಿ.ಸಿ ಯಲ್ಲಿ ಬೆಳೆ ಮಾಹಿತಿ ಅಳವಡಿಸಲು ಬಳಸಲಾಗುತ್ತದೆ.

ಸಾರ್ವಜನಿಕರು ಗೂಗಲ್ ಪ್ಲೇಸ್ಟೋರ್ ನಲ್ಲಿ ಹಿಂಗಾರು ರೈತ ಬೆಳೆ ಸಮೀಕ್ಷೆ-2023 ಎಂದು ಟೈಪ್ ಮಾಡಿ ಅಥವಾ  https://play.google.com/store.apps.details?id=com.csk.farmer23_24.cropsurvey   ಲಿಂಕ್ ಅನ್ನು ಬಳಸಿ ಡೌನ್ಲೋಡ್ ಮಾಡಿಕೊಳ್ಳಬಹುದು. ನಂತರ ತಮ್ಮ ಆಧಾರ್ ಕಾರ್ಡ್ ನ ಮೂಲಕ E-KYC ಪ್ರಕ್ರಿಯೆ ಪೂರ್ಣಗೊಳಿಸಿ ನೊಂದಾಯಿಸಿಕೊoಡು ತಮ್ಮ ಜಮೀನಿನ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಆನಂತರ ತಮ್ಮ ಜಮೀನಿನಲ್ಲಿ ತೆರಳಿ, ಸಂಬoಧಪಟ್ಟ ಸರ್ವೆ ನಂಬರ್ ನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕು.

ರೈತರು ತಾವು ಬೆಳೆದ ಬೆಳೆ ವಿವರಗಳನ್ನು ಅಪ್ಲೋಡ್ ಮಾಡದಿದ್ದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಂದ ದೊರೆಯುವ ಸವಲತ್ತುಗಳನ್ನು ಪಡೆಯುವುದರಿಂದ ವಂಚಿತರಾಗುವ ಸಂಭವವಿರುತ್ತದೆ. ಆದ್ದರಿಂದ ಎಲ್ಲಾ ರೈತ ಬಾಂಧವರು ಹೆಚ್ಚಿನ ಆಸಕ್ತಿಯೊಂದಿಗೆ ಪ್ರಸಕ್ತ ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸುವಂತೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ರೈತರ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆ ಕಚೇರಿಗಳನ್ನು ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಲಾಗಿರುವ ಖಾಸಗಿ ನಿವಾಸಿಗಳನ್ನು ಅಥವಾ ಬೆಳೆ ಸಮೀಕ್ಷೆ ಸಹಾಯವಾಣಿ 18004253553 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Department- Agriculture –Releases- Crop Survey – 2023- App