ರಾಜ್ಯದಲ್ಲಿ ಏ.10 ರವರೆಗೆ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ…

ಬೆಂಗಳೂರು,ಏಪ್ರಿಲ್,6,2021(www.justkannada.in):  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 10 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Illegally,Sand,carrying,Truck,Seized,arrest,driver

ಇಂದು ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದ್ದು, ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Department - Meteorology – rain- state

ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, , ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಮಾಹಿತಿ ನೀಡಿದೆ.

Key words:  Department – Meteorology – rain- state