Thursday, August 6, 2026

BDA Apartments

Home Crime ಸಿಎಂ ಸಿದ್ಧರಾಮಯ್ಯ ಕುಟುಂಬದ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ಪೊಲೀಸರ ವಶಕ್ಕೆ..

ಸಿಎಂ ಸಿದ್ಧರಾಮಯ್ಯ ಕುಟುಂಬದ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ಪೊಲೀಸರ ವಶಕ್ಕೆ..

ಬೆಂಗಳೂರು,ಜುಲೈ 28,2023(www.justkannada.in): ಸಿಎಂ ಸಿದ್ದರಾಮಯ್ಯ  ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್​  ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು.

ಮುಸ್ಲಿಂ ವಿದ್ಯಾರ್ಥಿನಿಯರು ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾಡಿದ್ದು ಕಾಂಗ್ರೆಸ್ಸಿನವರ ಪ್ರಕಾರ ಮಕ್ಕಳಾಟವಂತೆ. ಇದನ್ನೆ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳ್ತಿದ್ರಾ ಎಂದು ಅವಹೇಳನಕಾರಿ ಪೋಸ್ಟ್‌ ಅನ್ನು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್  ಹಾಕಿದ್ದರು.

ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಇಂದು  ಶಕುಂತಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Key words: Derogatory post- against- CM Siddaramaiah-family- BJP worker -arrest