Friday, August 7, 2026

BDA Apartments

Home Crime ಹಳ್ಳದಲ್ಲಿ 7 ಬ್ರೂಣಗಳ ಪತ್ತೆ ಪ್ರಕರಣ: ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಸೀಜ್..

ಹಳ್ಳದಲ್ಲಿ 7 ಬ್ರೂಣಗಳ ಪತ್ತೆ ಪ್ರಕರಣ: ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಸೀಜ್..

ಬೆಳಗಾವಿ,ಜೂನ್,25,2022(www.justkannada.in):  ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ  7 ಭ್ರೂಣಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವೆಸಗಿದ್ಧ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ.

ಭ್ರೂಣಗಳನ್ನ ಎಸೆದಿದ್ದ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಅನ್ನು ಡಿಎಚ್ ಒ ಸೀಜ್ ಮಾಡಿದ್ದಾರೆ.   ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳನ್ನು ಆಸ್ಪತ್ರೆಯಲ್ಲೇ ಇಡಲಾಗಿತ್ತು. ಈ ಮಧ್ಯೆ ಪೊಲೀಸರ ದಾಳಿಯ ಭೀತಿಯಿಂದ ಆಸ್ಪತ್ರೆ ಸಿಬ್ಬಂದಿ ಭ್ರೂಣಗಳನ್ನು ಜೂನ್.23ರಂದು 5 ಬಾಟಲ್‌ ಗಳಲ್ಲಿ ತುಂಬಿಸಿ ಹಳ್ಳಕ್ಕೆ ಎಸೆದಿದ್ದರು. ಇದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದರು.

ಪೊಲೀಸರ ಪ್ರಾಥಮಿಕ ತನಿಖೆ ವೇಳೆ ವೆಂಕಟೇಶ ಆಸ್ಪತ್ರೆ ಆಡಳಿತ ಮಂಡಳಿಯು ತಮ್ಮದೇ ಆಸ್ಪತ್ರೆ ಭ್ರೂಣಗಳು ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

Key words: Detection -case-  Hospital – Scanning Center -Siege