ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಪತ್ನಿ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ….

ಮೈಸೂರು,ಆ,10,2020(www.justkannada.in): ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.jk-logo-justkannada-logo

ಹೆಚ್.ಡಿ ಕೋಟೆ ತಾಲ್ಲೂಕು ವಿಶ್ವನಾಥಯ್ಯ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಗೋವಿಂದನಾಯ್ಕ (30) ಮೃತ ವ್ಯಕ್ತಿ. ಕಳೆದ ರಾತ್ರಿ ಈ ಘಟನೆ ಸಂಭವಿಸಿದ್ದು  ಈ ಸಾವಿನ ಪ್ರಕರಣ ಸಾಕಷ್ಟು ಅನುಮಾನ ಹುಟ್ಟಿಸಿದೆ. ಕೌಟುಂಬಿಕ ಕಲಹದಿಂದ ಪತಿ ಮತ್ತು ಪತ್ನಿ ಇಬ್ಬರು ಬೇರೆಯಾಗಿದ್ದರು.detection-person-corpse-hanging-mysore

ಈ ನಡುವೆ ಕಳೆದ ತಡರಾತ್ರಿ  ನೇಣುಬಿಗಿದ ಸ್ಥಿತಿಯಲ್ಲಿ ಗೋವಿಂದ ನಾಯ್ಕನ ಶವ ಪತ್ತೆಯಾಗಿದ್ದು ಪೊಲೀಸರು ಮೃತನ ಪತ್ನಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್. ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Detection – person- corpse – hanging –mysore