ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ : 6 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳು ವಶ

ಮೈಸೂರು,ಮಾರ್ಚ್,21,2021(www.justkannada.in) : ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿ ಸೇರಿದಂತೆ ಅವುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು,  6 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳು ವಶಪಡಿಸಿಕೊಂಡಿದ್ದಾರೆ.jkನರಸಿಂಹರಾಜ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಂತಿನಗರದ ಪಯಾಜ್ ಅಹಮ್ಮದ್ ಹಾಗೂ ಕೆಸರೆಯ ಮೊಕ್ತಾರ್ ಪಾಷಾ ಬಂಧಿತ ಆರೋಪಿಗಳಾಗಿದ್ದಾರೆ.

Detention-two-wheeler-thieves-12 bikes-6 lakh seized

ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಕದ್ದ ಬೈಕ್ ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

key words : Detention-two-wheeler-thieves-12 bikes-6 lakh seized