ಎಸ್ ಸಿ ಮತ್ತು ಎಸ್ ಟಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ- ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ…

ಬೆಂಗಳೂರು,ಮೇ,28,2020(www.justkannada.in): ಎಸ್ ಸಿ ಮತ್ತು ಎಸ್ ಟಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ. ನಿಗದಿತ ಅವಧಿಯೊಳಗೆ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.

ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಬಿಎಸ್ ವೈ, ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹೆಚ್ಚು ಜನರಿಗೆ ಅನುಕೂಲವಾಗುವಂತ ಕಾರ್ಯಕ್ರಮ ಅನುಷ್ಠಾನಕ್ಕೆ ತರಬೇಕು. ಕೊರೋನಾ ಸಂಕಷ್ಟದಿಂದ ಜನ ಹಿಂದಿರುಗಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲೇ ಸುಮಾರು 25ರಿಂದ 30 ಸಾವಿರ ಜನ ವಾಪಸ್ ಆಗಿದ್ದಾರೆ. ಎಸ್ ಸಿ ಮತ್ತು ಎಸ್.ಟಿ ಸಮುದಾಯದ ಎಲ್ಲಾ ಕುಟುಂಬಗಳಿಗೂ ಮನ್ರೇಗಾ ಅಡಿ ಜಾಬ್ ಕಾರ್ಡ್ ನೀಡುವಂತೆ ಸಿಎಂ ಬಿಎಸ್ ವೈ ಸೂಚಿಸಿದರು.

Key words:  development -SC and ST- community-CM BS Yeddyurappa – Officers.