ಬೆಂಗಳೂರು,ಜನವರಿ,19,2026 (www.justkannada.in): ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ವತಃ ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಿಜಿಪಿ ರಾಮಚಂದ್ರರಾವ್ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದಾರೆ. ರಾಸಲೀಲೆಯಲ್ಲಿರುವ ವ್ಯಕ್ತಿ ನಾನಲ್ಲ ಅದು ಎಐ ವಿಡಿಯೋ. ನ ನ್ನ ವಿರುದ್ದ ಯಾರೋ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ.
ಈ ಕಾಲದಲ್ಲಿ ಏನು ಬೇಕಾದರೂ ಮಾಡಬಹುದು. ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿ ಇದ್ದೆ ಇದರ ಬಗ್ಗೆ ನಾನು ವಕೀಲರ ಜೊತೆ ಮಾತನಾಡುತ್ತೇನೆ. ಇದರ ಬಗ್ಗೆ ತನಿಖೆ ಆಗಬೇಕು ಎಂದು ರಾಮಚಂದ್ರರಾವ್ ತಿಳಿಸಿದ್ದಾರೆ.
Key words: Raasleela, video, viral, DGP Ramachandra Rao







